ಬೆಂಗಳೂರು: ಬೆಂಗಳೂರಿನಲ್ಲಿ ಹಾಡುಹಗಲೇ ಸಿನಿಮೀಯ ಶೈಲಿಯಲ್ಲಿ ರೌಡಿ ಶೀಟರ್ ಮೇಲೆ ಅಟ್ಯಾಕ್ ನಡೆದಿದ್ದು, ಹಲ್ಲೆ ನಡೆದ 20 ನಿಮಿಷದಲ್ಲೇ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರಿನ ಹೆಗಡೆ ನಗರದಲ್ಲಿ ಜೂನ್ 11 ರಂದು ಘಟನೆ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಜಲಕ್ ಎಂಬಾತನ ಮೇಲೆ ಕುಮಾರ್ ಮತ್ತು ಮೋಹನ್ ಎಂಬುವವರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಘಟನೆ ನಡೆದ 20 ನಿಮಿಷದಲ್ಲೇ ಇಬ್ಬರೂ ಆರೋಪಿಗಳನ್ನು ಕೊತ್ತನೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.