ಕೋಲಾರ: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ವರು ಮೃತಪಟ್ಟಿದ್ದಾರೆ.
ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿರುವ ಮನೆಯಲ್ಲಿ ನಿನ್ನೆ ಸಂಜೆ ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಮುನಿಯಪ್ಪ(70), ಬಾಬು (45), ಗಂಗೋತ್ರಿ(17) ಹಾಗೂ ನಾರಾಯಣಮ್ಮ (65) ಮೃತಪಟ್ಟಿದ್ದಾರೆ. ಪುಷ್ಪ (33) ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಅಂತರಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್ ಹೆಸರಲ್ಲಿ ಗೈಡ್ ಗಳಿಂದ ಲಕ್ಷಾಂತರ ರೂ. ವಂಚನೆ…
ಪುಷ್ಪ ಅವರು ಗಂಡು ಮಗುವೊಂದನ್ನು ಬೇರೊಬ್ಬರಿಗೆ ಮಾರಾಟ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದು ವಿಚಾರಣೆ ನಡೆಸಲಾಗಿತ್ತು. ಕೇಸ್ ದಾಖಲಾಗಿದ್ದಕ್ಕೆ ಮಾನಕ್ಕೆ ಅಂಜಿದ ಎಲ್ಲರೂ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.