ಮೈಸೂರು : ಮೈಸೂರಿನಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿನ ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದ್ರು. ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ನಾಗೇಂದ್ರ ಹಾಗೂ ವಿವಿಧ ಗಣ್ಯರು ಭಾಗಿಯಾಗಿದ್ದರು.