ಬೆಂಗಳೂರು : ಅಗ್ನಿಪಥ್ ವಿರುದ್ಧದ ಹೋರಾಟ ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್ ಉರಿಯೋ ಬೆಂಕಿಗೆ ತುಪ್ಪ ಸುರಿಯುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿ ಅಗ್ನಿಪಥ್ ಯೋಜನೆಯಲ್ಲಿ ಸಶಕ್ತ ಯುವ ಶಕ್ತಿ ರೂಪಿಸಲಾಗುತ್ತೆ. ಈಗಾಗಲೇ ಸೇನಾ ಪರೀಕ್ಷೆ ಬರೆದ ಕೆಲವರಿಗೆ ಆತಂಕ ಇರಬಹುದು. ಅದನ್ನೆಲ್ಲ ಕೇಂದ್ರ ಸರ್ಕಾರ ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ. ಈ ನೆಪದಲ್ಲಿ ಪ್ರತಿಭಟನೆ, ರೈಲಿಗೆ ಬೆಂಕಿ ಹಾಕೋದು ಸರಿಯಲ್ಲ. ಕರ್ನಾಟಕದಲ್ಲಿ ಕೂಡ ಪ್ರತಿಭಟನೆ ನಡೆಯುತ್ತಿದ್ದು, ಖಾನಪುರ, ನಿಪ್ಪಾಣಿಯಲ್ಲಿ ಕೂಡ ಪ್ರತಿಭಟನೆ ನಡೆಯುತ್ತಿದೆ. ಅಲ್ಲಿನ ಶಾಸಕರು ಕೂಡ ಅದಕ್ಕೆ ಬೆಂಬಲ ಕೊಡುತ್ತಿದ್ದಾರೆಂದು ಅಗ್ನಿಪಥ್ ಹೋರಾಟದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಪ್ರಧಾನಿ ಸ್ವಾಗತಕ್ಕೆ ರೆಡಿಯಾಗ್ತಿದೆ ಕರ್ನಾಟಕ..! ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ : ಸಿಎಂ ಬೊಮ್ಮಾಯಿ…!