ಬೆಳಗಾವಿ : ಬೆಳಗಾವಿಯಲ್ಲಿ ಅಗ್ನಿಪಥ್ ಯೋಜನೆ ಖಂಡಿಸಿ ಜೂನ್ 20 ರಂದು ಬಂದ್ಗೆ ಕರೆ ನೀಡಲಾಗಿದೆ. ಯುವಕರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಗೋಕಾಕ್ ಕಾಂಗ್ರೆಸ್ ಕಾರ್ಯಕರ್ತರು, ಯುವಕರು ರಾಷ್ಟ್ರೀಯ ಹೆದ್ದಾರಿ, ಬೆಂಗಳೂರು ಮುಂಬೈ ಹೆದ್ದಾರಿ ತಡೆದು ಧರಣಿ ನಡೆಸಲು ನಿರ್ಧರಿಸಿದ್ಧಾರೆ.
ಈ ಬಗ್ಗೆ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಜೂನ್ 20 ರಂದು ಖಾನಾಪುರ ಬಂದ್ಗೆ ಕರೆ ನೀಡಲಾಗಿದೆ. ಕೇಂದ್ರ ಸರ್ಕಾರ ಯಾವುದೇ ಉದ್ಯೋಗವನ್ನ ಸೃಷ್ಟಿಸುತ್ತಿಲ್ಲ. ಅಗ್ನಿಪಥ್ ಯೋಜನೆ ತಂದು ನಮ್ಮ ತಾಲೂಕಿನ ಮೂರು ಸಾವಿರ ಯುವಕರಿಗೆ ಅನ್ಯಾಯ ಮಾಡುತ್ತಿದೆ. ಯಾವುದೆ ಕಾರಣಕ್ಕೂ ಈ ಯೋಜನೆ ಜಾರಿಯಾಗಲು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುತ್ತೆವೆ ಎಂದು ಹೇಳಿದ್ಧಾರೆ.
ಇಂದು ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರೊಟೆಸ್ಟ್ ನಡೆಸಿದ್ಧಾರೆ. ಕೇಂದ್ರ ಸರ್ಕಾರದ ವಿರುದ್ಧ ನೂರಾರು ಯುವಕರ ಆಕ್ರೋಶ ಹೊರಹಾಕುತ್ತಿದ್ದಾರೆ. ತಹಶಿಲ್ದಾರ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆದಿದೆ. ಸೇನಾ ನೇಮಕಾತಿ ಹೊಸ ನಿಯಮ ಅಗ್ನಿಪಥ್ ಕೈಬಿಡಲು ಮನವಿ ಮಾಡಿಕೊಳ್ಳುತ್ತಿದ್ದು, ತಹಶೀಲ್ದಾರ್ ಕಛೇರಿವರೆಗೂ ಮೆರವಣಿಗೆ ನಡೆಸಲಾಗಿದೆ.
ಇದನ್ನೂ ಓದಿ : ಸೋನಿಯಾ ಗಾಂಧಿ ಪರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ರಿಂದ ಯುವ ಜನತೆಗೆ ನೀಡಿದ್ರು ಆ ಸಂದೇಶ..!