ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಐತಿಹಾಸಿಕ ಚುನಾವಣೆಗೆ AICC ಸಜ್ಜಾಗಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಹತ್ವದ ಚುನಾವಣೆ ನಾಳೆ ನಡೆಯಲಿದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕರ್ನಾಟಕದಲ್ಲಿಯೇ ಮತದಾನ ಮಾಡಲಿದ್ದಾರೆ .
ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಚುನಾವಣಾ ಕಣದಲ್ಲಿ ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ಇದ್ದಾರೆ. ಅಧ್ಯಕ್ಷರ ಆಯ್ಕೆಗೆ ಕರ್ನಾಟಕದಲ್ಲಿ ಎರಡು ಮತದಾನ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ. ಕೆಪಿಸಿಸಿ ಕಚೇರಿ ಹಾಗು ಸಂಗನಕಲ್ಲು ಕ್ಯಾಂಪ್’ನಲ್ಲಿ ಮತದಾನ ಕೇಂದ್ರ ಸ್ಥಾಪನೆಯಾಗಿದೆ. ಸಂಗನಲ್ಲ ಕ್ಯಾಂಪ್’ನಲ್ಲಿ ಮತದಾನ ಮಾಡಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ 494 ಸದಸ್ಯರು ಮತದಾನ ಮಾಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿ ಕೆ ಹರಿಪ್ರಸಾದ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್ ಸೇರಿದಂತೆ ಇತರರು ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯಲಿದೆ. ಕರ್ನಾಟಕದ ಎರಡೂ ಮತದಾನ ಕೇಂದ್ರಗಳಿಂದ ದೆಹಲಿಯ ಸ್ಟ್ರಾಂಗ್ ರೂಂಗೆ ಮತ ಪೆಟ್ಟಿಗೆಗಳ ರವಾನೆ ಮಾಡಲಾಗುತ್ತದೆ. ಅ. 19 ರಂದು ಎಐಸಿಸಿ ಕಚೇರಿಯಲ್ಲಿಮತ ಏಣಿಕೆ ನಡೆಯಲಿದೆ ಚುನಾವಣೆ ನಡೆದರೂ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಿದೆ.
ಇದನ್ನೂ ಓದಿ : ತುಮಕೂರಿನ ಕಲ್ಲೂರು ಕೆರೆಯಲ್ಲಿ ಕೈಕಾಲು ತೊಳೆಯಲು ಹೋದ ಇಬ್ಬರು ನೀರುಪಾಲು…