ಖ್ಯಾತ ಬಾಲಿವುಡ್ ತಾರೆ, ನಟಿ ಅನುಷ್ಕಾ ಶರ್ಮ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಬಗ್ಗೆ ಸಂತಸ ಹಂಚಿಕೊಂಡಿರುವ ವಿರಾಟ್ ಕೋಹ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂತಸದ ಕುರಿತು ಬರೆದುಕೊಂಡಿದ್ದಾರೆ. ‘ನಿಮ್ಮೊಂದಿಗೆ ಈ ವಿಚಾರವನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನಿಮ್ಮೆಲ್ಲರ ಹಾರೈಕೆ, ಪ್ರಾರ್ಥನೆಗಳಿಗಾಗಿ ಧನ್ಯವಾದಗಳು..! ನಿಮ್ಮ ಪ್ರೀತಿ ವಿಶ್ವಾಸದಿಂದ ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ
— Virat Kohli (@imVkohli) January 11, 2021