ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ಕುರಿತು ದೇಶದ ಹಲವು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಜೊತೆಗೆ ಯೋಜನೆಯ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಗ್ನಿವೀರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
4 ವರ್ಷದ ಬಳಿಕ ಸೇನೆಗೆ ಆಯ್ಕೆಯಾಗದವರು ಏನು ಮಾಡಬೇಕು ಎಂಬ ಪ್ರಶ್ನೆ ಯುವಜನರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅಗ್ನಿಪಥ ಯೋಜನೆಯಲ್ಲಿ ಆಯ್ಕೆಯಾಗಿ 4 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ರಾಜ್ಯದ ಯುವಕರನ್ನು ಪೊಲೀಸ್ ಇಲಾಖೆಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಅರಗ ಜ್ಞಾನೇಂದ್ರ ಅವರು ಬಿಟಿವಿ ಸ್ಟುಡಿಯೋದಲ್ಲಿ ತಿಳಿಸಿದ್ದಾರೆ.