ಮುಂಬೈ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಏಷ್ಯಾ ಕಪ್ ನ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆಗಸ್ಟ್ 27 ರಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಆಗಸ್ಟ್ 27 ರಂದು ಟೂರ್ನಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯ ಸೆಪ್ಟೆಂಬರ್ 11 ರಂದು ನಡೆಯಲಿದೆ.
Men's #AsiaCup2022 schedule released. India will face Pakistan on 28th August. pic.twitter.com/TiTqVgiUYL
— ANI (@ANI) August 2, 2022
ಯುಎಇ, ಕುವೈತ್, ಸಿಂಗಾಪುರ ಮತ್ತು ಹಾಂಗ್ ಕಾಂಗ್ ತಂಡಗಳು ಕ್ವಾಲಿಫೈಯರ್ ಪಂದ್ಯಗಳನ್ನಾಡಲಿದ್ದು, ಕ್ವಾಲಿಫೈಯರ್ ಸುತ್ತಿನಲ್ಲಿ ವಿಜೇತ ತಂಡ 6 ನೇ ತಂಡವಾಗಿ ಟೂರ್ನಿಯಲ್ಲಿ ಆಡಲಿದೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ ತಂಡಗಳಿದ್ದು, ಕ್ವಾಲಿಫೈಯರ್ ಸುತ್ತಿನ ವಿಜೇತ ತಂಡ ಎ ಗುಂಪಿಗೆ ಸೇರ್ಪಡೆಯಾಗಲಿದೆ. ಇನ್ನು ಬಿ ಗುಂಪಿನಲ್ಲಿ ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳಿವೆ. ಈ ವರ್ಷ ಏಷ್ಯಾ ಕಪ್ ಟೂರ್ನಿ ಟಿ20 ಫಾರ್ಮ್ಯಾಟ್ ನಲ್ಲಿ ನಡೆಯಲಿದೆ.