ಗುವಾಹತಿ: ಅಸ್ಸಾಂನಲ್ಲಿ ಕಳೆದ 15 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಬ್ರಹ್ಮಪುತ್ರ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಮತ್ತು ಭೂ ಕುಸಿತದಿಂದಾಗಿ 160 ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಗ್ರಾಮಗಳು ಜಲಾವೃತವಾಗಿದೆ. ಸೇನಾ ಹೆಲಿಕಾಪ್ಟರ್ಗಳ ನೆರವಿನಿಂದ ಸಂತ್ರಸ್ತರಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ.