ಬೆಂಗಳೂರು: ಜಿಟಿ ಜಿಟಿ ಮಳೆಗೆ ಐಟಿಸಿಟಿ ಹೈರಾಣಾಗಿದ್ದು, ಬೆಂಗಳೂರು ವಾತಾವರಣ ಮಲೆನಾಡಿನಂತಾಗಿದೆ. ಕರ್ನಾಟಕದ 13 ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಇಂದು, ನಾಳೆ ಕೂಡಾ ರಾಜ್ಯದ ಹಲವೆಡೆ ಮಳೆಯಾಗಲಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯಲ್ಲಿ 3 ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಮುಂದಿನ 2 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಗಳಿದೆ.
ಇದನ್ನೂ ಓದಿ:#Flashnews ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ…! ಕಾರಿನ ಏರ್ ಬ್ಯಾಗ್ ಓಪನ್… ಬದುಕುಳಿದ ಜೀವ…!