ರಾಜ್ಯದಲ್ಲಿ ಸೆಮಿ ಲಾಕ್‌ಡೌನ್, ಸೆಮಿ ಲಾಕ್‌ಡೌನ್, ಕರ್ಫ್ಯೂ ಇಲ್ಲ. ಲಸಿಕೆ ಪ್ರಮಾಣ ಹೆಚ್ಚಿಸಬೇಕಿದೆ. ಈ ಬಗ್ಗೆ ಕೇಂದ್ರ ಮಾರ್ಗಸೂಚಿ ಏನು ಬರುತ್ತೆ ಅಂತ ನೋಡ್ಬೇಕಿದೆ. ನಂತ್ರ ಕೆಲವೊಂದು ಬದಲಾವಣೆಗಳನ್ನ ಮಾಡಲಾಗುತ್ತೆ ಅಂತ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ :ಮಹಾರಾಷ್ಟ್ರದ ಆ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಘೋಷಣೆ..! ಎಷ್ಟು ದಿನ ಲಾಕ್ ಆಗುತ್ತೆ ಗೊತ್ತಾ..?
ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸೆಮಿ ಲಾಕ್‌ಡೌನ್ ಮಾಡಲಾಗುತ್ತೆ ಅಂತಾ ಹೇಳಲಾಗ್ತಿತ್ತು. ಆದ್ರೆ, ಈ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವ್ರು, ಸಧ್ಯದ ಮಟ್ಟಿಗೆ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್, ಸೆಮಿ ಲಾಕ್‌ಡೌನ್, ಕರ್ಫ್ಯೂ ಇಲ್ಲ. ಆದ್ರೂ ಮಾರ್ಗಸೂಚಿ ನೋಡ್ಬೇಕಿದೆ. ಇನ್ನು ಕಳೆದ 3 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ತುಂಬಾ ಜಾಸ್ತಿ ಆಗಿದೆ. ಮತ್ತಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ’ ಎಂದರು.
ಇದನ್ನೂ ಓದಿ : ಲಾಕ್‌ಡೌನ್ ಬಗ್ಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದೇನು ಗೊತ್ತಾ?
ಇನ್ನು ಬೆಂಗಳೂರು ಮಟ್ಟಿಗೆ 6 ರಿಂದ 9ನೇ ತರಗತಿಗಳು ಸ್ಥಗಿತಗೊಳಿಸಲಾಗಿದೆ. ಅದು ಕೂಡ 15 ದಿನಗಳ ಮಟ್ಟಿಗೆ ಮಾತ್ರ. ನಂತ್ರದ ದಿನಗಳಲ್ಲಿ ಪರಿಸ್ಥಿತಿಯನ್ನ ನೋಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತೆ ಅಂತ ಹೇಳಿದ್ದಾರೆ.