ನವದೆಹಲಿ: ನಾನು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಿಲ್ಲ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಿಳಿಸಿದ್ದಾರೆ.
ತಮ್ಮ ದೆಹಲಿ ಪ್ರವಾಸದ ಉದ್ದೇಶದ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ ಅವರು’ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು (Draupadi Murmu) ಅವರಿಗೆ ಸೂಚಕರಾಗಿ ಸಹಿ ಮಾಡಲು ಆಗಮಿಸಿದ್ದೆ. ನಾಳೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಎಲ್ಲಾ ಸಿಎಂಗಳಿಗೆ ಹಾಜರಿರಲು ಹೈಕಮಾಂಡ್ ಸೂಚಿಸಿದೆ.
ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲು ಮಾತ್ರ ಬಂದಿದ್ದೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಿಲ್ಲ, ಕೇಂದ್ರ ಸಚಿವರನ್ನು ಭೇಟಿ ಮಾಡುವುದಿಲ್ಲ. ಸಂಪುಟವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆಸುವುದಿಲ್ಲ. ನಾನು ಪ್ರತಿಬಾರಿ ದೆಹಲಿಗೆ ಬಂದಾಗ ಇದೇ ರೀತಿಯ ಸುದ್ದಿಯಾಗುತ್ತೆ. ನಾಮಪತ್ರ ಸಲ್ಲಿಕೆ ಹೊರತು ಇನ್ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ ಎಂದು ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.