ಬೆಂಗಳೂರು : ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಮತ್ತು ಪಕ್ಷ ಸಿದ್ಧವಾಗಿದೆ. ಚುನಾವಣೆ ಗೆದ್ದು ಅಧಿಕಾರಕ್ಕೇರುವ ವಿಶ್ವಾಸವಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಕಂದಾಯ ಸಚಿವ ಆರ್ ಅಶೋಕ್ ಅವರು ‘BBMP ಚುನಾವಣೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ನಮ್ಮ ಸರ್ಕಾರ ಸ್ವಾಗತ ಮಾಡುತ್ತದೆ. ಚುನಾವಣೆ ನಡೆಸಲು ನಮ್ಮ ಸರ್ಕಾರ ಮತ್ತು ಪಕ್ಷ ಸಿದ್ಧವಾಗಿದೆ. ಮೀಸಲಾತಿ ನಿಗದಿ ಮಾಡಲು ನ್ಯಾಯಾಲಯ ಎಂಟು ವಾರಗಳ ಕಾಲ ಸಮಯ ನೀಡಿದೆ. ಸುಪ್ರೀಂ ಆದೇಶಕ್ಕೆ ಸರ್ಕಾರ ಬದ್ಧವಾಗಿದೆ.
ಬಿಬಿಎಂಪಿ ಚುನಾವಣೆಗೆ ನಮ್ಮ ಪಕ್ಷ ಈಗಾಗಲೇ ಭರದ ಸಿದ್ಧತೆ ಮಾಡಿಕೊಂಡಿದೆ. ಪಕ್ಷದ ಸಂಘಟನೆ ಭದ್ರವಾಗಿದ್ದು, ಪೇಜ್ ಪ್ರಮುಖ್ ಕಾರ್ಯಕೂಡ ಮುಕ್ತಾಯವಾಗಿದೆ. ಈ ಬಾರಿ ಬಿಜೆಪಿ ಭಾರಿ ಬಹುಮತದೊಂದಿಗೆ ಬಿಬಿಎಂಪಿಯಲ್ಲಿ ಅಧಿಕಾರದ ಚುಕ್ಕಾಣೆ ಹಿಡಿಯಲಿದೆ ಎಂಬ ಧೃಡ ವಿಶ್ವಾಸ ನನಗಿದೆ. ನಾವು ಈಗಾಗಲೇ ವಾರ್ಡ್ ಮಟ್ಟದಲ್ಲಿ ಸಭೆ, ಚುನಾವಣಾ ಕಾರ್ಯತಂತ್ರ, ಜನರ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ನೀಲ ನಕ್ಷೆ ಸಿದ್ಧಪಡಿಸಿದ್ದೇವೆ. ರಾಜ್ಯ ಸರ್ಕಾರದ ಸಾಧನೆ ಮತ್ತು ನಮ್ಮ ಪಕ್ಷದ ಗಟ್ಟಿ ಸಂಘಟನೆ ಒಂದುಗೂಡಿ ಬಿಬಿಎಂಪಿ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆದು, ಬೆಂಗಳೂರು ಮಹಾನಗರದ ಜನತೆಯ ಕೂಗಿಗೆ ನಾವು ದನಿಯಾಗಲಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : BBMP ಎಲೆಕ್ಷನ್ಗೆ ಸುಪ್ರೀಂಕೋರ್ಟ್ ಸೂಚನೆ..! 9 ವಾರಗಳಲ್ಲಿ ಎಲೆಕ್ಷನ್ ಪ್ರಕ್ರಿಯೆ ಆರಂಭಿಸಲು ಆದೇಶ..!