ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ ಎಂದು ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಅಬ್ದುಲ್ ವಾಜಿದ್ ತಿಳಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು… ಸಿದ್ದು ಸಿಎಂ ಆಗಲಿ ಎಂದು ಪ್ರಾರ್ಥಿಸಿ: ಜಮೀರ್ ಅಹ್ಮದ್ ಖಾನ್..
ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿರುವ ಅಬ್ದುಲ್ ವಾಜಿದ್ ಅವರು ‘ಸರ್ಕಾರ ತಕ್ಷಣ ಚುನಾವಣೆ ನಡೆಸಬೇಕು. ಸಂವಿಧಾನದ ಪ್ರಕಾರ 6 ತಿಂಗಳೊಳಗೆ ಚುನಾವಣೆ ನಡೆಸಬೇಕಿತ್ತು. ಸುಪ್ರೀಂ ಕೋರ್ಟ್ ನ ಆದೇಶವನ್ನು ಸ್ವಾಗತ ಮಾಡುತ್ತೇವೆ. ಮಧ್ಯಪ್ರದೇಶ ರಾಜ್ಯಕ್ಕೆ ಸಂಬಂಧಿಸಿದ ತೀರ್ಪಿನಲ್ಲಿ ಚುನಾವಣೆ ನಡೆಸಿ ಎಂದು ಹೇಳಿದೆ. ಎಲ್ಲಾ ರಾಜ್ಯಗಳ ಚುನಾವಣಾ ಆಯೋಗಕ್ಕೂ ಸಮಯ ಪ್ರಕಾರ ಚುನಾವಣೆ ನಡೆಸುವಂತೆ ಸೂಚಿಸಿದೆ. ಹೀಗಾಗಿ ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಚುನಾವಣಾ ಆಯೋಗ ಮತ್ತು ಸರ್ಕಾರಕ್ಕೆ ಆಗ್ರಹಿಸುತ್ತೇವೆ’ ಎಂದು ತಿಳಿಸಿದ್ದಾರೆ.