ಮುಂಬೈ: ಬಿಸಿಸಿಐ ಏಷ್ಯಾಕಪ್ ಟೂರ್ನಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಿದ್ದು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಉಪ ನಾಯಕ ಕೆ.ಎಲ್. ರಾಹುಲ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಜನರ ತಂಡವನ್ನು ಪ್ರಕಟಿಸಲಾಗಿದೆ. ವೆಸ್ಟ್ ಇಂಡೀಸ್ ಪ್ರವಾಸಕ್ಕೆ ವಿಶ್ರಾಂತಿ ನೀಡಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಇನ್ನು ಗಾಯದ ಸಮಸ್ಯೆ ಮತ್ತು ಕೊರೋನಾದಿಂದಾಗಿ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಆಡದಿದ್ದ ಕೆ.ಎಲ್. ರಾಹುಲ್ ತಂಡಕ್ಕೆ ವಾಪಸ್ಸಾಗಿದ್ದಾರೆ.
ಆಗಸ್ಟ್ 27 ರಿಂದ ಯುಎಇ ನಲ್ಲಿ ಏಷ್ಯಾ ಕಪ್ ಆರಂಭವಾಗಲಿದ್ದು, ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಏಷ್ಯಾ ಕಪ್ ಮುಗಿದ ಬೆನ್ನಲ್ಲೇ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ನಡೆಯಲಿದೆ. ಇನ್ನು ಶಿಖರ್ ಧವನ್ ನೇತೃತ್ವದಲ್ಲಿ ಆಗಸ್ಟ್ 18 ರಿಂದ ಜಿಂಬಾಂಬ್ವೆ ವಿರುದ್ಧ 3 ಪಂದ್ಯಗಳ ಸರಣಿಯನ್ನಾಡಲು ಟೀಂ ಇಂಡಿಯಾ ತೆರಳಲಿದೆ.
🚨#TeamIndia squad for Asia Cup 2022 – Rohit Sharma (Capt ), KL Rahul (VC), Virat Kohli, Suryakumar Yadav, Deepak Hooda, R Pant (wk), Dinesh Karthik (wk), Hardik Pandya, R Jadeja, R Ashwin, Y Chahal, R Bishnoi, Bhuvneshwar Kumar, Arshdeep Singh, Avesh Khan.
— BCCI (@BCCI) August 8, 2022
ಇನ್ನು ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಬೆಂಗಳೂರಿನಲ್ಲಿರುವ ಎನ್ ಸಿ ಎ ನಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
ಏಷ್ಯಾ ಕಪ್ ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (WK), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ , ಹರ್ಷದೀಪ್ ಸಿಂಗ್, ಅವೇಶ್ ಖಾನ್.