ಹುಬ್ಬಳ್ಳಿ: ಸಿದ್ದರಾಮಯ್ಯ ಬಿಟ್ಕಾಯಿನ್ ದಂಧೆಯಲ್ಲಿ ರಾಜಕಾರಣಿಗಳ ಭಾಗಿ ವಿಚಾರ ಬಹಿರಂಗಪಡಿಸಿದ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಬಿಟ್ ಕಾಯಿನ್, ಡ್ರಗ್ಸ್ ಎರಡೂ ಕೇಸ್ ಗಳ ತನಿಖೆ ಮಾಡಿಸುತ್ತಿದ್ದೇವೆ. ರಾಜ್ಯದಲ್ಲಿ ಸಮಗ್ರ ತನಿಖೆ ಆದ ಮೇಲೆ ED, ಸಿಬಿಐ ತನಿಖೆಗೆ ವಹಿಸಿದ್ದೇವೆ. ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಇತ್ತ ಬಿಟ್ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಕೂಡ ಮಾತನಾಡಿದ್ದು, ಈ ಬಗ್ಗೆ ತನಿಖೆ ನಡೀತಿದೆ ಹೀಗಾಗಿ ಅದರ ಬಗ್ಗೆ ಮಾತಾಡಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಶಾರೂಕ್ ಖಾನ್ ಪುತ್ರನಿಗೆ ಕಡೆಗೂ ಸಿಕ್ತು ಜಾಮೀನು… ಆರ್ಯನ್ ಖಾನ್ ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್…