ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದ್ದು, ಶೀಘ್ರದಲ್ಲೇ ಕೇಂದ್ರ ಚುನಾವಣಾ ಸಮಿತಿಗೆ ಪಟ್ಟಿಯನ್ನು ರವಾನೆ ಮಾಡಲಾಗುವುದು.
ಇದನ್ನೂ ಓದಿ: ಬಿ.ವೈ. ವಿಜಯೇಂದ್ರ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್… ಬಿಜೆಪಿ ವರಿಷ್ಠರಿಂದ ಬಿಎಸ್ವೈಗೆ ಭರವಸೆ…
ಬಿಜೆಪಿ ಹೈಕಮಾಂಡ್ ಸಮ್ಮತಿ ನಂತರ ದೆಹಲಿಯಿಂದಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ರಾಜ್ಯಸಭೆಯ 4 ಸ್ಥಾನಗಳಿಗೆ 4 ಹೆಸರುಗಳನ್ನು ಫೈನಲ್ ಮಾಡಲಾಗಿದ್ದರೆ, ವಿಧಾನ ಪರಿಷತ್ ನ 7 ಸ್ಥಾನಗಳಿಗೆ 15 ಕ್ಕೂ ಹೆಚ್ಚು ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.
ಇನ್ನು ವಿಧಾನ ಪರಿಷತ್ ಚುನಾವಣೆಯ ಸಂಭವನೀಯ ಪಟ್ಟಿಯಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರನ್ನೂ ಸೇರಿಸಿರುವ ಮಾಹಿತಿ ಇದೆ. ಜೊತೆಗೆ ಮಾಜಿ ಸಚಿವ ಲಕ್ಷ್ಮಣ ಸವದಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ಛಲವಾದಿ ನಾರಾಯಣಸ್ವಾಮಿ ಅವರ ಹೆಸರುಗಳು ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಬೃಹತ್ ಆರೋಗ್ಯ ಮೇಳ…
ರಾಜ್ಯಸಭೆ ಚುನಾವಣೆಗೆ ನಾಲ್ವರ ಹೆಸರು ಶಿಫಾರಸು ಮಾಡಲಾಗಿದ್ದು, ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿಗೆ ಮತ್ತೆ ಮಣೆ ಹಾಕಲಾಗಿದೆ. ಇವರೊಂದಿಗೆ ನಿರ್ಮಲ್ ಕುಮಾರ್ ಸುರಾನ ಮತ್ತು ಲೆಹರ್ ಸಿಂಗ್ ಹೆಸರನ್ನೂ ಶಿಫಾರಸು ಮಾಡಲಾಗಿದೆ ಎಂದು ತಿಳಿದು ಬಂದಿದೆ.