ಬೆಂಗಳೂರು: ಡಿಕೆ ಶಿವಕುಮಾರ್ ಅವರೇ ಯಾವ ಶಬ್ದಕ್ಕೆ ಯಾವ ಅರ್ಥ ಎಂದು ಮಹಮದ್ ನಲಪಾಡ್ (Mohammed Nalapad) ಅವರಿಗೆ ಪಾಠ ಮಾಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಯೂತ್ ಕಾಂಗ್ರೆಸ್ ಅಧ್ಯ್ಕಷ ಮಹಮದ್ ನಲಪಾಡ್ ಅವರು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿಕೆ ಕೊಟ್ಟಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ‘ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಅವರಿಗೆ ಅಕ್ಷರಾಭ್ಯಾಸ ಮಾಡುವಾಗಲೇ ದೋಷವುಂಟಾಗಿದೆ. ರಾಹುಲ್ ಗಾಂಧಿ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದ್ದಾರೆ. ಡಿಕೆಶಿ ಅವರೇ, ಯಾವ ಶಬ್ದಕ್ಕೆ ಯಾವ ಅರ್ಥ ಎಂದು ಪಾಠ ಮಾಡಿ’ ಎಂದು ಟ್ವೀಟ್ ಮಾಡಿದೆ.