ಬಾಲಿವುಡ್ ನ ಬ್ಯಾಡ್ ಬಾಯ್, ಎಲಿಜಿಬಲ್ ಬ್ಯಾಚುಲರ್ ಎಂದೇ ಫೇಮಸ್ ಆಗಿರುವ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ರಷ್ಯಾದಲ್ಲಿ ತಮ್ಮ ಮುಂದಿನ ಚಿತ್ರದ ಶೂಟಿಂಗ್ ಪಾಲ್ಗೊಂಡಿದ್ದಾರೆ. ಚಿತ್ರೀಕರಣದ ವೇಳೆ ಕೆಂಪು ಬಣ್ಣದ ಉದ್ದ ದಾಡಿ ಮತ್ತು ಉದ್ದ ಕೂದಲು ಬಿಟ್ಟುಕೊಂಡು ರಷ್ಯಾದ ಬೀದಿಯಲ್ಲಿ ಓಡಾಡಿದ್ದ ಸಲ್ಮಾನ್ ಖಾನ್ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ರಾಜ್ಯಾದ್ಯಂತ ಶಾಲೆ-ಕಾಲೇಜ್ ಗಳು ಓಪನ್.. ಕೊವೀಡ್ ಸುರಕ್ಷತಾ ಕ್ರಮ ಪರಿಶೀಲಿಸಿದ ಸಿಎಂ ಬೊಮ್ಮಾಯಿ..
ಬಾಲಿವುಡ್ ಭಾಯ್ ಸಲ್ಮಾನ್ ಖಾನ್ ಫೋಟೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತದೆ. ಸಲ್ಮಾನ್ ಖಾನ್ ಏನೇ ಮಾಡಿದರು ಡಿಫರೆಂಟ್ ಆಗಿ ಮಾಡ್ತಾರೆ. ರಷ್ಯಾದಲ್ಲಿ ನಡೆಯುತ್ತಿರುವ ಟೈಗರ್ 3 ಚಿತ್ರೀಕರಣದಲ್ಲಿ ಕೆಂಪು ಬಣ್ಣದ ಉದ್ದ ದಾಡಿ ಮತ್ತು ಉದ್ದ ಕೂದಲು ಬಿಟ್ಟುಕೊಂಡು ಡಿಫರೆಂಟ್ ಲುಕ್ ನಲ್ಲಿ ಕಾಣುತ್ತಿದ್ದಾರೆ. ಈ ನ್ಯೂ ಲುಕ್‍ನಲ್ಲಿ ಸಲ್ಮಾನ್ ಖಾನ್ ಸಖತ್ ವಿಭಿನ್ನವಾಗಿ ಕಾಣಿಸಿಕೊಂಡಿದ್ದು, ಅವರ ಗುರುತೇ ಸಿಗದಂತೆ ಬದಲಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಸಲ್ಮಾನ್ ಕಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇದನ್ನೂ ಓದಿ: 18 ತಿಂಗಳ ನಂತರ ಆರಂಭವಾಗುತ್ತಿರುವ ಶಾಲೆ- ಕಾಲೇಜುಗಳು… ಮದುವಣಗಿತ್ತಿಯಂತೆ ಸಜ್ಜಾದ ಶಾಲೆಗಳು..
ಈ ಫೋಟೊಗಳಲ್ಲಿ ಸಲ್ಮಾನ್ ಲುಕ್ ನೋಡಿ ಭಾರತದ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಟೈಗರ್-3 ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಂಬೈನಲ್ಲಿ ಮುಕ್ತಾಯವಾಗಿದೆ. ಆಗಸ್ಟ್ 18ರಂದು ಚಿತ್ರತಂಡ 45 ದಿನಗಳ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಿದೆ. ಮನೀಶ್ ಶರ್ಮಾ ಟೈಗರ್-3 ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಇಮ್ರಾನ್ ಹಶ್ಮಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದರಲ್ಲೂ ಸಲ್ಮಾನ್ ಮತ್ತು ಕತ್ರಿನಾ, ಟೈಗರ್ ಹಾಗೂ ಜೋಯಾ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.