ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕರ್ನಾಟಕ ವಿಕಾಸ ಆಗ್ತಿದೆ. ಬೊಮ್ಮಾಯಿ ನೇತೃತ್ವದಲ್ಲಿ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ತುಂಬಿದ ಸಭೆಯಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾಡಿಹೊಗಳಿದ್ದಾರೆ.
ಕೊಮ್ಮಘಟ್ಟದ ಸಮಾವೇಶದಲ್ಲಿ ಮಾತನಾಡಿದ ಮೋದಿ ಅವರು ಬೊಮ್ಮಾಯಿ ಸರ್ಕಾರದ ಜೊತೆ ಕೇಂದ್ರ ಸರ್ಕಾರ ನಿಲ್ಲಲಿದೆ . ರಾಜ್ಯದ ಭುಜಕ್ಕೆ ಭುಜ ಕೊಟ್ಟು ನಾವು ಕೆಲಸ ಮಾಡುತ್ತೇವೆ. ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಬೆಳವಣಿಗೆ ಆಗುತ್ತೆ ಎಂದು ತಿಳಿಸುವ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶ ರವಾನೆ ಮಾಡಿದ್ದು, ಬೊಮ್ಮಾಯಿ ಸರ್ಕಾರವನ್ನ ಶ್ಲಾಘಿಸಿದ್ಧಾರೆ.
ಇದನ್ನೂ ಓದಿ : ಎಲ್ಲಾ ಕನ್ನಡಿಗರಿಗೂ ನನ್ನ ನಮಸ್ಕಾರಗಳು… ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ…