ದೆಹಲಿ: ಬೊಮ್ಮಾಯಿ ರಾಜೀನಾಮೆ ವದಂತಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ಶೆಟ್ಟರ್ಗೆ ದೆಹಲಿಯಿಂದ ಬುಲಾವ್ ನೀಡಲಾಗಿದೆ. ಇಂದು ಜೆಪಿ ನಡ್ಡಾರನ್ನ ಭೇಟಿಯಾಗಲು ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಲಿದ್ದಾರೆ.
ಸಿಎಂ ಹೈಕಮಾಂಡ್ ಭೇಟಿ ಬೆನ್ನಲ್ಲೇ ದೆಹಲಿಗೆ ಜಗದೀಶ್ ಶೆಟ್ಟರ್ ತೆರಳುತ್ತಿದ್ದು, ರಾಜ್ಯದಲ್ಲಿ ಸಿಎಂ ರಾಜೀನಾಮೆ ವದಂತಿಗೆ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಹೈಕಮಾಂಡ್ ಬುಲಾವ್ ನೀಡಿದ್ದು, ದೆಹಲಿಯಲ್ಲಿ ಜೆಪಿ ನಡ್ಡಾ ಭೇಟಿ ಮಾಡಲಿದ್ದಾರೆ.
ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಶೆಟ್ಟರ್ರಿಂದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮಾಹಿತಿ ಪಡೆಯಲಿದ್ದು, ಮೂರು ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿ, ಪ್ರಧಾನಿ ಮೋದಿ ಸೇರಿ ಹಲವರು ನಾಯಕರನ್ನ ಭೇಟಿಯಾಗಿದ್ದರು, ಈ ಬೆನ್ನಲ್ಲೇ ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಜೋರಾಗಿತ್ತು ಜಗದೀಶ್ ಶೆಟ್ಟರ್ ದೆಹಲಿ ಭೇಟಿ ಈಗ ಭಾರೀ ಕುತೂಹಲ ಮೂಡಿಸಿದೆ.
ಇದನ್ನೂ ಓದಿ:ಪಂಜಾಬ್ ನಲ್ಲಿ 1 ರಿಂದ 10ನೇ ತರಗತಿವರೆಗೆ ಪಂಜಾಬಿ ಭಾಷೆ ಕಡ್ಡಾಯ… ಚರಣ್ ಜೀತ್ ಸಿಂಗ್ ಛನ್ನಿ ಸರ್ಕಾರದ ಆದೇಶ…