ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿಂದಗಿ, ಹಾನಗಲ್ ಉಪ ಚುನಾವಣೆಗೆ ಸಂಬಂಧಿಸಿದಂತೆ ದಾವಣೆಗೆರೆ ಜಿಎಂಐಟಿಯಲ್ಲಿ ಸಚಿವರಾದ ಬಿ.ಸಿ. ಪಾಟೀಲ, ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ಮುಖಂಡರ ಜೊತೆಗೆ ಗುಪ್ತ ಸಭೆ ನಡೆಸಿದ್ದಾರೆ.
ಸೋಮವಾರ ರಾತ್ರಿ ದಾವಣಗೆರೆಗೆ ಹೋಗಿದ್ದ ಸಿಎಂ ಬೊಮ್ಮಾಯಿ, ಗುಪ್ತ ಸಭೆ ನಡೆಸಿದ್ದು, ಇಂದು ಹಾವೇರಿ ಜಿಲ್ಲೆಯ ಇನ್ನೂ ಕೆಲವು ನಾಯಕರೊಂದಿಗೆ ಇನ್ನೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಚುನಾವಣೆ ನಿರ್ವಹಣೆಗೆ ಪ್ರತ್ಯೇಕ ಸಮಿತಿಯನ್ನ ಬೊಮ್ಮಾಯಿ ರಚಿಸಲಿದ್ದಾರೆ ಎಂದು ಬಿಜೆಪಿಯ ಪ್ರಮುಖರು ತಿಳಿಸಿದ್ದಾರೆ.
ಇನ್ನೂ ಯಡಿಯೂರಪ್ಪ ಅವರನ್ನ ಯಾರೂ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಸಿಲ್ಲ. ಬಿಎಸ್ವೈ ಅವರೇ ಸಿಎಂ ಸ್ಥಾನವನ್ನ ಬಿಟ್ಟುಕೊಟ್ಟಿದ್ದಾರೆ. ಲಿಂಗಾಯತರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ಇಬ್ಬರೂ ಹಾನಗಲ್, ಸಿಂದಗಿಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಬಿ.ಸಿ. ಪಾಟೀಲ ಹೇಳಿದ್ದಾರೆ.
ಇದನ್ನೂ ಓದಿ: ಕಲ್ಲಿದ್ದಲು ಕೊರತೆಯಿಂದ RTPS ನ ಮತ್ತೊಂದು ಘಟಕ ಬಂದ್..!