ನೆಲಮಂಗಲ: ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲರ ಜೊತೆ ಸಮಾಲೋಚನೆ ಮಾಡಿ ಸಚಿವ ಸಂಪುಟ ವಿರಸ್ತರಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನೆಲಮಂಗಲದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ಮೇ 10 ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಜನರಲ್ಲಿ ಜಾಗೃತಿಗಾಗಿ ಕಿಮ್ಮನೆ ರತ್ನಾಕರ್ ರಿಂದ ಪಾದಯಾತ್ರೆ…
ಇನ್ನು ಮುಖ್ಯಮಂತ್ರಿಗಳ ಬದಲಾವಣೆ ಕೇವಲ ಊಹಾಪೋಹದ ಸುದ್ದಿ, ಆ ರೀತಿಯ ಯಾವುದೇ ಸುದ್ದಿ ಇಲ್ಲ ಎಂದು ಯಡಿಯೂರಪ್ಪ ತಿಳಿಸಿದ್ಧಾರೆ.