ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅನೇಕ ಲೆಕ್ಕಾಚಾರಗಳ ನಂತರ ಕೊನೆಗೂ ಸಂಪುಟಕ್ಕೆ ಸೇರ್ಪಡೆಯಾಗುತ್ತಿರುವ ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ ಕಳಿಸಿದ್ದಾರೆ.
ಉಮೇಶ್ ಕತ್ತಿ : ಹುಕ್ಕೇರಿ ಕ್ಷೇತ್ರದ ಶಾಸಕರಾಗಿರುವ ಉಮೇಶ್ ಕತ್ತಿಗೆ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರ ಮತ್ತು ರೈತರ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸತತ 6 ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ.
ಅರವಿಂದ ಲಿಂಬಾವಳಿ : ಮಹದೇವಪುರ ಕ್ಷೇತ್ರದ ಶಾಸಕರಾಗಿರುವ ಅರವಿಂದ ಲಿಂಬಾವಳಿಗೆ ಸಚಿವ ಸ್ಥಾನ ಒಲಿದು ಬಂದಿದೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಎಂ.ಟಿ.ಬಿ ನಾಗರಾಜ್ : ಸದ್ಯ ಮೇಲ್ಮನೆ ಸದಸ್ಯರಾಗಿರುವ ಬಿಜೆಪಿ ನಾಯಕ ಎಂ.ಟಿ.ಬಿ ನಾಗರಾಜ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಮುರುಗೇಶ್ ನಿರಾಣಿ : ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುರುಗೇಶ್ ನಿರಾಣಿಯವರಿಗೆ ಸಚಿವ ಸ್ಥಾನದ ಭಾಗ್ಯ ಒಲಿದು ಬಂದಿದೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಆರ್.ಶಂಕರ್ :ಮೇಲ್ಮನೆ ಸದಸ್ಯರಾಗಿರುವ ಆರ್. ಶಂಕರ್ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರ ಮತ್ತು ರೈತರ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಸಿ.ಪಿ ಯೋಗೇಶ್ವರ್: ಸದ್ಯ ಮೇಲ್ಮನೆ ಸದಸ್ಯರಾಗಿರುವ ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಎಸ್.ಅಂಗಾರ : ದ.ಕ ಜಿಲ್ಲೆಯ ಸುಳ್ಯ ಕ್ಷೇತ್ರದ ಶಾಸಕರಾಗಿರುವ ಎಸ್. ಅಂಗಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರ ಹೆಸರಲ್ಲಿ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸತತ 6 ಬಾರಿ ಬಿಜೆಪಿಯಿಂದ ಆಯ್ಕೆಯಾಗಿರುವ ಇವರು ಮೊದಲ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ವೈ , ರಾಝ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸರ್ಕಾರದ ಸಚಿವರು, ಬಿಜೆಪಿ ಶಾಸಕರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು