ಬೆಂಗಳೂರು: ಕೇಂದ್ರ ಮತ್ತು ರಾಜ್ಯಗಳಲ್ಲಿ ಒಂದೇ ಪಕ್ಷದ ಆಡಳಿತ ಇರುವ ಡಬಲ್ ಎಂಜಿನ್ ಸರ್ಕಾರಗಳು ಇರಬೇಕೆಂದು ಜನರು ನಿರ್ಧರಿಸಿದ್ದು, ಜಾತಿ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಪಂಜಾಬ್ನಲ್ಲಿ ಮುಖಭಂಗವಾಗಿದೆ , ಜನರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೇಂದ್ರ ಮತ್ತು ರಾಜ್ಯಗಳಲ್ಲಿ ಒಂದೇ ಪಕ್ಷದ ಆಡಳಿತ ಇರುವ ಡಬಲ್ ಎಂಜಿನ್ ಸರ್ಕಾರಗಳು ಇರಬೇಕೆಂದು ಜನರು ನಿರ್ಧರಿಸಿದ್ದು, ಚುನಾವಣೆ ನಡೆದ ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಜನರು ಬಿಜೆಪಿಗೆ ಇದೇ ಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ಕರ್ನಾಟಕದ ಬಿಜೆಪಿ ನಾಯಕರು ವಿಶ್ಲೇಷಿಸಿದ್ದಾರೆ. ಪಂಜಾಬ್ನಲ್ಲಿ ಜಾತಿ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಮುಖಭಂಗವಾಗಿದೆ. ಜನರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.