ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಹಾವಳಿ ಹೆಚ್ಚಾಗುತ್ತಿದ್ದು, ಕುಡಿದ ನಶೆಯಲ್ಲಿ ಸಿನಿಮಾ ಸ್ಟೈಲ್ನಲ್ಲಿ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಯುವಕರ ಮುಖದ ಭಾಗ ಗಂಭೀರ ಗಾಯವಾಗಿದೆ. ಪುಂಡರ ಹಲ್ಲೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಳೆದ 2 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶದ ರೈತನಿಗೆ 6 ಬಾರಿ ಒಲಿದ ಅದೃಷ್ಟ ದೇವತೆ… 2 ವರ್ಷದಲ್ಲಿ ಈತನಿಗೆ ಸಿಕ್ತು 6 ವಜ್ರಗಳು..!