ಉಡುಪಿ: ರಾಜ್ಯಾದ್ಯಂತ 1000 ಎಲೆಕ್ಟ್ರಿಕ್ ಚಾರ್ಜಿಂಗ್ ಸೆಂಟರ್ ಸ್ಥಾಪನೆ ಮಾಡಲಾಗುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ಧಾರೆ.
ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಸುನಿಲ್ ಕುಮಾರ್ ದ್ವಿಚಕ್ರ ಮತ್ತು ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳು ಸಾಕಷ್ಟು ಬರುತ್ತಿದೆ. ರಾಜ್ಯಾದ್ಯಂತ ಚಾರ್ಜಿಂಗ್ ಸೆಂಟರ್ ಗಳನ್ನು ಸ್ಥಾಪನೆ ಮಾಡುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಚಾರ್ಜಿಂಗ್ ಸೆಂಟರ್ಗಳನ್ನು ಮೊದಲು ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.
ವರದಿ : ಮಂಜುನಾಥ್
ಸ್ಥಳ : ಉಡುಪಿ
ಇದನ್ನೂ ಓದಿ : ಒಂದಿಂಚು ನೆಲವನ್ನೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲವೇ ಇಲ್ಲ… ಗಡಿ ಖ್ಯಾತೆ ತೆಗೆದ ಮಹಾರಾಷ್ಟ್ರ ಡಿಸಿಎಂಗೆ ಸಿಎಂ ಬೊಮ್ಮಾಯಿ ತಿರುಗೇಟು…