ಚಿತ್ರದುರ್ಗ: ಮುಂಬರುವ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ನಾನು ಎಲ್ಲಿ ಚುನಾವಣೆ ಸ್ಪರ್ಧಿಸಬೇಕು ಎಂಬುದು ಪಕ್ಷ ತೀರ್ಮಾನ ಮಾಡಬೇಕು. ನಾನು ಪಕ್ಷಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಕನಿಷ್ಠ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಎಂದು ಹೇಳಿದ್ದಾರೆ.
ಈ ಬಗ್ಗೆ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ BY ವಿಜಯೇಂದ್ರ ಮಾತನಾಡಿದ್ದು, ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ, ಕನಿಷ್ಠ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಇಡೀ ದೇಶದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡಿದೆ. ಬರುವ ದಿನಗಳಲ್ಲಿ ಕಾಂಗ್ರೆಸ್ ಎಲ್ಲಿರುತ್ತದೆ ಎಂದು ತಿಳಿಯುತ್ತದೆ, ಬಿಜೆಪಿ ಪಕ್ಷ ಉಪ ಸಮರದಲ್ಲಿ ವಿಜಯ ಪತಾಕೆ ಹಾರಿಸಿದೆ, ಈ ಚುನಾವಣೆಯಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳ ಗೆಲವು ಶತಃ ಸಿದ್ದವಾಗಿದೆ ಎಂದು ಹೇಳಿದ್ದಾರೆ.
ಇನ್ನೂ BJP ಮತ್ತು JDS ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ BY ವಿಜಯೇಂದ್ರ, ರಾಜ್ಯ ಬಿಜೆಪಿ ಅಧ್ಯಕ್ಷರು, ಮುಖ್ಯಮಂತ್ರಿಗಳು, ಯಡಿಯೂರಪ್ಪ ಅವರು ಚರ್ಚಿಸಿ ನಿರ್ಧಾರ ಮಾಡುತ್ತಾರೆ, ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ಇದೆ. ಹೆಚ್ಚಿನ ಅಂತರದಲ್ಲಿ ಗೆಲ್ಲಲು ಜೆಡಿಎಸ್ ಪಕ್ಷದ ಬಗ್ಗೆ ಹೇಳಿದ್ದಾರೆ. BJP ಪಕ್ಷದ ಶಕ್ತಿ ಹಿಂದಿನ ಚುನಾವಣೆಯಲ್ಲಿ ಗೊತ್ತಾಗಿದೆ, ಈಗಲೂ ಕೂಡಾ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ. ಇನ್ನೂ ಕೊವೀಡ್ ಮೂರನೇ ಅಲೆ ಕುರಿತು ಪ್ರತಿಕ್ರಿಯಿಸಿದ BY ವಿಜಯೇಂದ್ರ, ಈಡೀ ಜಗತ್ತಿನಲ್ಲಿ ಆತಂಕ ಸೃಷ್ಟಿಯಾಗಿದೆ. ಆರ್ಥಿಕ ಸಂಕಷ್ಟದಿಂದ ಹೊರ ಬಂದ ವೇಳೆ ಮತ್ತೆ ಈ ರೀತಿ ವಿಚಾರ ಆತಂಕ ತಂದಿದೆ.
ಇದನ್ನೂ ಓದಿ: ಅಕಾಲಿಕ ಮಳೆಯಿಂದ ಬೆಳೆ ಹಾನಿ… ಎರಡು ಎಕರೆ ದ್ರಾಕ್ಷಿ ಬೆಳೆಯನ್ನು ಕೊಡಲಿಯಿಂದ ಕಡಿದು ನಾಶ ಮಾಡಿದ ಅಥಣಿಯ ರೈತ…