ಚಿತ್ರದುರ್ಗ: ರಾಜ್ಯದಲ್ಲಿ ಕೊರೋನಾ ಆಭರ್ಟ ಜೋರಾಗಿದ್ದು, ಎಲ್ಲರಲ್ಲೂ ಆತಂಕವನ್ನು ಸೃಷ್ಟಿಸಿದೆ. ಜನಸಾಮಾನ್ಯರ ಜೊತೆಗೆ ಕಾನೂನು ಕಾಪಾಡುವ ಪೊಲೀಸ್ ಅಧಿಕಾರಿಗಳಲ್ಲೂ ಕೊರೋನಾ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಪೊಲೀಸ್ ಠಾಣೆಗಳಿಗೆ ಕೊರೋನಾ ಶಾಕ್ ಕೊಟ್ಟಿದೆ.
ಚಿತ್ರದುರ್ಗದ ಚಳ್ಳಕೆರೆ ಪೊಲೀಸ್ ಠಾಣೆಯ 7 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಡೀ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಿದ್ದಾರೆ. ಸಿಬ್ಬಂದಿಯು ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ್ದಾರೆ. ತಾತ್ಕಾಲಿಕವಾಗಿ ಇಡೀ ಠಾಣೆ ಸ್ಥಳಾಂತರವಾಗಿದ್ದು , DySPಕಚೇರಿಗೆ ಸ್ಥಳಾಂತರ ಮಾಡಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಪೊಲೀಸರ ಸಂಪರ್ಕದಲ್ಲಿದ್ದವರಿಗೆ ಕೊರೋನಾ ಟೆಸ್ಟ್ ಮಾಡಿಸಲಾಗುತ್ತಿದೆ.
ಇದನ್ನೂ ಓದಿ : ದೇಶದಲ್ಲಿ ಇಳಿಮುಖ ಆರಂಭಿಸಿದ ಕೊರೋನಾ…! ನೆನ್ನೆಗಿಂತ ಇಂದು 20 ಸಾವಿರ ಕೇಸ್ಗಳಷ್ಟು ಕಡಿಮೆ…!