ಬೆಂಗಳೂರು: ಸಿಎಂಗೆ ರಾಜಕೀಯ ಕಾರ್ಯದರ್ಶಿಗಳ ನೇಮಕ ಮಾಡಲಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಆಪ್ತರಿಗೆ ಸರ್ಕಾರದಲ್ಲಿ ಮಣೆ ಹಾಕಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ಬೈ ಎಲೆಕ್ಷನ್ ಹೊತ್ತಲ್ಲೇ ಬಿಎಸ್ವೈ ಆಪ್ತರಿಗೆ ಸಿಎಂ ಗಿಫ್ಟ್ ಕೊಟ್ಟಿದ್ದಾರೆ. ರಾಜಕೀಯ ಕಾರ್ಯದರ್ಶಿಗಳ ಸ್ಥಾನದಲ್ಲಿ ಶಾಸಕ ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರನ್ನು ಮುಂದುವರೆಸಿದ್ದಾರೆ. ಬಿಎಸ್ ಯಡಿಯೂರಪ್ಪ ಸರ್ಕಾರದಲ್ಲೂ ರೇಣುಕಾಚಾರ್ಯ, ಜೀವರಾಜ್ ರಾಜಕೀಯ ಕಾರ್ಯದರ್ಶಿಗಳಾಗಿದ್ದರು. ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಜೀವರಾಜ್ಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಎಂದು ಸಿಎಂ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಕಾಲು ಕತ್ತರಿಸಿದ ನಿವೃತ್ತ ಯೋಧ