ಬೆಂಗಳೂರು: ನಾಳೆ ಶೃಂಗೇರಿ, ಶಿವಮೊಗ್ಗ ಪ್ರವಾಸಕ್ಕೆ ಸಿಎಂ ಬೊಮ್ಮಾಯಿ ತೆರಳಲಿದ್ದು, ಈಶ್ವರಪ್ಪ ಮೊಮ್ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಾಳೆ ಬೆಳಗ್ಗೆ 8.30 ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಸಿಎಂ ತೆರಳುತ್ತಿದ್ದು, ಶೃಂಗೇರಿ ಶಾರದಾಂಬ ದರ್ಶನ ಪಡೆಯಲಿದ್ದಾರೆ. ಶಾರದಾಂಬ ದೇವಿ ದರ್ಶನ ಬಳಿಕ ಕೊಪ್ಪದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದು, ಬಳಿಕ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿರುವ ಸಭೆಗಳಲ್ಲಿ ಸಿಎಂ ಭಾಗಿಯಾಗಲಿದ್ದು, ಶಿವಮೊಗ್ಗದಲ್ಲೇ ಸಿಎಂ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. ಜೊತೆಗೆ ಈಶ್ವರಪ್ಪ ಮೊಮ್ಮಗನ ಮದುವೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ:ದಿವ್ಯಾ ಹಾಗರಗಿ ಬಿಜೆಪಿ ನಾಯಕಿ ಅಲ್ಲ… ರಾಜ್ಯ ಬಿಜೆಪಿ ಘಟಕದಿಂದ ಸ್ಪಷ್ಟನೆ…