ಬೆಂಗಳೂರು: ರಾಜ್ಯಾದ್ಯಂತ ನಾಡ ಹಬ್ಬ ದಸರಾ ಸಂಭ್ರಮ ಮನೆ ಮಾಡಿದೆ. ಇಂದು ನವರಾತ್ರಿಯ ಕೊನೆಯ ದಿನ ವಿಜಯದಶಮಿಯಾಗಿದ್ದು, ಈ ವಿಶೇಷ ದಿನಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ವೈ ಗೆ ಶುಭ ಕೋರಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯುರಪ್ಪರನ್ನ ಭೇಟಿ ಮಾಡಿದ್ದಾರೆ. ಬಿಎಸ್ ವೈ ಗೆ ವಿಜಯದಶಮಿ ಶುಭ ಕೋರುವ ನಿಟ್ಟಿನಲ್ಲಿ ಭೇಟಿಯಾಗಿದ್ದಾರೆ. ಬಿಎಸ್ ವೈ ಜೊತೆ ಒಂದು ಗಂಟೆಗಳ ಕಾಲ ಚರ್ಚಿಸಿದ್ದಾರೆ.