ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಿಎಂ ಬೊಮ್ಮಾಯಿ ಸರ್ಕಾರಿ ನೌಕರರ ವರ್ಗಾವಣೆ ಕುರಿತು ಮಹತ್ವದ ಆದೇಶ ನೀಡಿದ್ದಾರೆ.
ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಎಲ್ಲಾ ವರ್ಗಾವಣೆಗಳನ್ನು ಕೂಡಲೇ ನಿಲ್ಲಿಸುವಂತೆ ಆದೇಶ ನೀಡಿದ್ದು, ಯಾವುದೇ ಹುದ್ದೆಗೆ ವರ್ಗಾವಣೆ ಮಾಡದಂತೆ ಖಡಕ್ ಆದೇಶ ನೀಡಿದ್ದಾರೆ. ಅಧಿಕೃತ ಪತ್ರದ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದು, ಅಯವ್ಯಯ ಅಧಿವೇಶನ ಮತ್ತು ಸಾರ್ವತ್ರಿಕ ವಿಧಾನಸಭೆ ಚುನಾವಣೆ ಕಾರಣ ವರ್ಗಾವಣೆಗೆ ಬ್ರೇಕ್ ನೀಡಿದ್ದಾರೆ. ಸಿಎಂ ಬೊಮ್ಮಾಯಿ ವರ್ಗಾವಣೆಯ ಆಸೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಬ್ರೇಕ್ ಹಾಕಿದ್ದು, ಚುನಾವಣೆ ಮುಗಿಯುವವರೆಗೆ ಯಾವುದೇ ನೋಟಿಫಿಕೇಶನ್ ಹೊರಡಿಸದಂತೆ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ದೈನಂದಿನ ರಾಶಿ ಭವಿಷ್ಯ..! 24/01/23