ಬೆಂಗಳೂರು: ಕಾಂಗ್ರೆಸ್ ಪಕ್ಷದ ಎಂಎಲ್ಸಿ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷ ತೊರೆದಿರುವ ಬಗ್ಗೆ ಮಾಜಿ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ಸಿ.ಎಂ. ಇಬ್ರಾಹಿಂ ವಿಚಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿರ್ಧರಿಸುತ್ತಾರೆ, ಈ ವಿಚಾರ ಮಾತಾಡುವಷ್ಟು ದೊಡ್ಡವನು ನಾನಲ್ಲ ಎಂದು ತಿಳಿಸಿದ್ಧಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಎಂಬಿ ಪಾಟೀಲ್ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪಕ್ಷದ ಜೊತೆಗಿದೆ. ಯು.ಟಿ. ಖಾದರ್, ನಸೀರ್ ಅಹ್ಮದ್ ಸೇರಿ ಹಲವರು ಪಕ್ಷದಲ್ಲಿದ್ದಾರೆ. ಮುಸ್ಲಿಂ ಸಮುದಾಯದ ಹಲವರಿಗೆ ಹಲವು ಸ್ಥಾನಮಾನ ಸಿಕ್ಕಿದೆ. ಸಿ.ಎಂ ಇಬ್ರಾಹಿಂ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದೆ… ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಸಚಿವ ಕೆ. ಗೋಪಾಲಯ್ಯ…