ಬೆಂಗಳೂರು : ಕಾಂಗ್ರೆಸ್ ಸೇರುವ ವದಂತಿ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಪ್ರತಿಕ್ರಿಯಿಸಿದ್ದು ಯಾವ ಕಾರಣಕ್ಕೂ ಮತ್ತೆ ಕಾಂಗ್ರೆಸ್ಗೆ ಹೋಗಲ್ಲ ಎಂದು ಬಿಟಿವಿಗೆ ಕರೆಮಾಡಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಎಂಟಿಬಿ ನಾಗರಾಜ್ ಮಾತನಾಡಿ 40ವರ್ಷ ಕಾಂಗ್ರೆಸ್ ನಲ್ಲಿ ಇದ್ದೆ, ಆ ಪಕ್ಷವನ್ನು ಬಿಟ್ಟು ಬಂದಿದ್ದೇನೆ , ಇದ್ದರೆ ಬಿಜೆಪಿಯಲ್ಲೇ ಇರುತ್ತೇನೆ ಇಲ್ಲದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ನನಗೆ ಕರೆ ಮಾಡಿದ್ದು ವರ್ಗಾವಣೆ ವಿಚಾರಕ್ಕಾಗಿ ಅದರ ಹೊರತಾಗಿ ಯಾವ ಕಾಂಗ್ರೆಸ್ ನಾಯಕರ ಮುಖವನ್ನೇ ನಾನು ನೋಡಿಲ್ಲ. . ಡಿಕೆ ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅವರ ಜೊತೆ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕೋವಿಡ್ ಸೋಂಕು ತಗುಲಿದ ಕಾರಣ ಆಸ್ಪತ್ರೆ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ದೇವೇಗೌಡ ಇಂದು ಡಿಸ್ಚಾರ್ಜ್..