ಬೆಂಗಳೂರು: ಬಿಜೆಪಿಯಿಂದ ಕೆಲ ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ ಎಂಬ ಮಾತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಅಭದ್ರತೆ ಕಾಡುತ್ತಾ ಇದ್ದು, ಇದೇ ಕಾರಣಕ್ಕೆ ಬಿಜೆಪಿಯಿಂದ ಬರುತ್ತಾರೆ ಅವರು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಕಾಂಗ್ರೆಸ್ಗೆ ಎಷ್ಟು ಅಭದ್ರತೆ ಕಾಡುತ್ತಿದೆ ಅಂತ ಗೊತ್ತಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗುತ್ತೆ ನೀವೇ ನೋಡುತ್ತೀರ. ಬಿಜೆಪಿಯಿಂದ ಯಾರೂ ಕಾಂಗ್ರೆಸ್ಗೆ ಹೋಗುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಬೇಡ ಅಂತ ಬಂದವರು ಆ ಕಡೆ ಹೋಗುವುದಿಲ್ಲ. ಕೆಲ ದಿನಗಳಲ್ಲಿ ಬಿಜೆಪಿ ಯಾವ ರೀತಿ ಬಲವರ್ಧನೆ ಆಗುತ್ತೆ ನೋಡುತ್ತೀರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮೂಟೆ ಹೊರುವವರಿಗೆ ಎಲ್ಲಾದರೂ ಒಂದೇ… ಯಾವುದೇ ಜವಾಬ್ದಾರಿಯನ್ನೂ ಅಚ್ಚುಕಟ್ಟಾಗಿ ನಿಭಾಯಿಸುವೆ: ವಿ ಸೋಮಣ್ಣ…