ಬೆಂಗಳೂರು : ಭ್ರಷ್ಟಾಚಾರದ ಗಂಗೋತ್ರಿ ಅಂದ್ರೆ ಅದು ಕಾಂಗ್ರೆಸ್, ಕಾಂಗ್ರೆಸ್ ಸೋಗಲಾಡಿತನ ಮಾಡ್ತಿದೆ. ಭ್ರಷ್ಟಾಚಾರದ ಕಾಂಗ್ರೆಸ್ ಹೋರಾಟ ನಾಚಿಕೆಗೇಡು ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿ ಭ್ರಷ್ಟಾಚಾರದ ಗಂಗೋತ್ರಿ ಅಂದ್ರೆ ಅದು ಕಾಂಗ್ರೆಸ್, ಕಾಂಗ್ರೆಸ್ ಸೋಗಲಾಡಿತನ ಮಾಡ್ತಿದೆ. ಲೋಕಾಯುಕ್ತ ಸಂಸ್ಥೆ ಮುಚ್ಚಿದ ಪುಣ್ಯಾತ್ಮರು ಇವರು, ಇಂಥವರು ನಮಗೆ ಭ್ರಷ್ಟಾಚಾರದ ಬಗ್ಗೆ ಪಾಠ ಮಾಡ್ತಾರೆ. ಲೋಕಾಯುಕ್ತ ಯಾಕೆ ಮುಚ್ಚಿದ್ರು..? ಭ್ರಷ್ಟಾಚಾರದ ಜೊತೆ ಸೇರಿ ಸರ್ಕಾರ ನಡೆಸಿದ್ದು ಕಾಂಗ್ರೆಸ್-
ತಾವು ಅಧಿಕಾರದಲ್ಲಿದ್ದಾಗ ಎಲ್ಲಾ ಕೇಸ್ಗಳನ್ನೂ ಮುಚ್ಚಿಹಾಕಿದ್ರು, ತಾವು ಮಾಡಿದ ಪಾಪದ ಕೆಲಸ ಮುಚ್ಚಿಕೊಳ್ಳಲು ಪ್ರತಿಭಟನೆ ಮಾಡ್ತಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಅದು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್ ಪ್ರತಿಭಟನೆಗೆ ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.