ನವದೆಹಲಿ: 1988ರಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪಂಜಾಬ್ ಕಾಂಗ್ರೆಸ್ ಪ್ರದೇಶ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
34 ವರ್ಷಗಳ ಹಿಂದೆ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ನವಜೋತ್ ಸಿಂಗ್ ಸಿಧು ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅನಾರೋಗ್ಯದ ಕಾರಣದಿಂದಾಗಿ ಸಿಧುಗೆ ಶರಣಾಗಲು ಕೆಲವು ವಾರಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: BBMP ಚುನಾವಣೆಗೆ ಸರ್ಕಾರ, ಪಕ್ಷ ಸಿದ್ಧ… ಬಿಜೆಪಿ ಭಾರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣೆ ಹಿಡಿಯಲಿದೆ: ಆರ್. ಅಶೋಕ್…
ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾದ ಬಳಿಕ ನಾನು ಕಾನೂನಿಗೆ ತಲೆಬಾಗುತ್ತೇನೆ ಎಂದು ಸಿಧು ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು ಪಂಜಾಬ್ ನ ಪಟಿಯಾಲಾ ಕೋರ್ಟ್ ನಲ್ಲಿ ಶರಣಾಗಬಹುದು ಎನ್ನಲಾಗುತ್ತಿದೆ. ಆದರೆ ಅವರು ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
Will submit to the majesty of law ….
— Navjot Singh Sidhu (@sherryontopp) May 19, 2022
1988 ರ ಡಿಸೆಂಬರ್ 27 ರಂದು ನವಜೋತ್ ಸಿಂಗ್ ಸಿಧು ಮತ್ತು ಅವರ ಸ್ನೇಹಿತ ರೂಪಿಂಗ್ ಸಿಂಗ್ ಸಂಧು ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪಟಿಯಾಲದಲ್ಲಿ ಗುರುನಾಮ್ ಸಿಂಗ್ ಎಂಬ ವ್ಯಕ್ತಿಯೊಂದಿಗೆ ಜಗಳವಾಡಿದ್ದರು. ಈ ವೇಳೆ ಸಿಂಧು ಮತ್ತು ಅವರ ಗೆಳೆಯ ಗುರ್ನಾಮ್ ಸಿಂಗ್ ಅವರನ್ನು ಕಾರಿನಿಂದ ಹೊರಗೆಳೆದು ಹಲ್ಲೆ ನಡೆಸಿದ್ದರು. ಗುರ್ನಾಮ್ ಸಿಂಗ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ರತ್ಯಕ್ಷದರ್ಶಿಗಳು ಸಿಧು ಮತ್ತು ಸಂಧು ಮೃತ ಗುರ್ನಾಮ್ ಸಿಂಗ್ ತಲೆಗೆ ಹೊಡೆದಿದ್ದರು ಎಂದು ತಿಳಿಸಿದ್ದರು.
ಇದನ್ನೂ ಓದಿ: ಬ್ಯಾಟರಾಯನಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ..! ವಿವಿಧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ..!
1999 ರಲ್ಲಿ ಕೆಳನ್ಯಾಯಾಲಯ ಸಾಕ್ಷಾಧಾರಗಳ ಕೊರತೆ ಇದೆಯೆಂದು ಸಿಧು ರನ್ನು ಖುಲಾಸೆಗೊಳಿಸಿತ್ತು. ಆದರೆ 2006 ರಲ್ಲಿ ಹೈಕೋರ್ಟ್ ಸಿಂಧುಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ ಸಿಧು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಧುಗೆ ಹೈಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ 1000 ರೂ. ದಂಡ ವಿಧಿಸಿತ್ತು. ನಂತರ ಗುರ್ನಾಮ್ ಸಿಂಗ್ ಕುಟುಂಬಸ್ಥರು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.