ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ (National Herald Case) ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಯನ್ನು ಜಾರಿ ನಿರ್ದೇಶನಾಲಯ (Enforcement Directorate) ವಿಚಾರಣೆಗೆ ಒಳಪಡಿಸುತ್ತಿದೆ. ಇಂದು ನಾಲ್ಕನೇ ದಿನದ ವಿಚಾರಣೆ ಪೂರ್ಣಗೊಂಡಿದ್ದು, ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ಸೋಮವಾರದಿಂದ ಬುಧವಾರದವರೆಗೆ ಸತತ 3 ದಿನ ರಾಹುಲ್ ಗಾಂಧಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಆ ಬಳಿಕ ಅಲ್ಪ ಬ್ರೇಕ್ ನೀಡಲಾಗಿತ್ತು. ಇಂದು ಮತ್ತೆ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ಸುಮಾರು 10 ಗಂಟೆ ವಿಚಾರಣೆ ನಡೆಸಿದ್ದಾರೆ. ಈ ಮೂಲಕ ಇದುವರೆಗೆ ಸುಮಾರು 40 ಕ್ಕೂ ಹೆಚ್ಚು ಗಂಟೆ ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: 3 ಮದುವೆ ಆಗಿರುವ ಟಾಲಿವುಡ್ ನಟನ ಜೊತೆ ನಟಿ ಪವಿತ್ರಾ ಲೋಕೇಶ್ 2ನೇ ಮದುವೆ..?
ಇನ್ನು ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಆಸ್ಪತ್ರೆಯಿಂದ ಡಿಸ್ಕಾರ್ಜ್ ಆಗಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಜೂನ್ 23 ರೊಳಗೆ ವಿಚಾರಣೆಗೆ ಹಾಜರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.