ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿದ್ದ ಚಪ್ಪಲಿ ಹೇಳಿಕೆಗೆ ಸ್ಪಷ್ಟನೆ ನೀಡಿ, ನಾನು ಯಾವುದೇ ಪಕ್ಷಗಳ ಹೆಸರನ್ನ ಹೇಳಿಲ್ಲ. ನನಗೆ ದೇವೇಗೌಡರ ಮೇಲೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ರಾಜ್ಯದಲ್ಲಿ ಮೂರು ಪಕ್ಷಗಳಿದ್ದಾವೆ, ಎರಡು ಪಕ್ಷಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಹಾಗಾಗಿ ಈ ವಿಚಾರ ಪ್ರಸ್ತಾಪ ಮಾಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ನಂತರ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರನ್ನ ಜೈಲಿಗೆ ಕಳಿಸ್ತೀನಿ ಎಂದಿದ್ದ ಹರಿ ಪ್ರಸಾದ್ಗೂ ಕೂಡ ಟಾಂಗ್ ನೀಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂದಿರಾಗಾಂಧಿ ಪಕ್ಷವನ್ನ ಮುಗಿಸಲು ಹೊರಟ್ರು. ಅಂದು ಯಾರೆಲ್ಲಾ ದ್ವೇಷ ಕಾರಿದ್ರು ಅವರ್ಯಾರೂ ಇಂದು ಉಳಿದಿಲ್ಲ. ಇಂದಿರಾಗಾಂಧಿ ಅವರೇ ನಮ್ಮನ್ನ ಜೈಲಿಗೆ ಕಳಿಸಲು ಯತ್ನ ಮಾಡಿದ್ರು ಆದ್ರೇ ಅದು ಅವ್ರ ಕೈಯಲ್ಲಿ ಸಾಧ್ಯವಾಗಿಲ್ಲ. ಕಾಂಗ್ರೆಸ್ ಪಕ್ಷ ದೇಶದಲ್ಲಿ ವಿರೋಧ ಪಕ್ಷವಾಗಿ ಇರಲು ಲಾಯಕ್ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.
ಇದನ್ನೂ ಓದಿ : ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನ ಹಿನ್ನೆಲೆ … ಬೆಂಗಳೂರಿನಲ್ಲಿ ಫುಲ್ ಅಲರ್ಟ್ ಆದ ರಾಜ್ಯ ಪೊಲೀಸರು…