ಲಖನೌ: ಉತ್ತರ ಪ್ರದೇಶ ಚುನಾವಣೆ ಅಖಾಡ ರಂಗೇರುತ್ತಿದ್ದು, ಪಕ್ಷಾಂತರ ಪರ್ವ ಜೋರಾಗಿದೆ. ಇಂದು ಕಾಂಗ್ರೆಸ್ ನ ಹಿರಿಯ ನಾಯಕ ಆರ್ ಪಿ ಎನ್ ಸಿಂಗ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.
ಆರ್ ಪಿ ಎನ್ ಸಿಂಗ್ ಅವರು ಪೂರ್ವ ಉತ್ತರ ಪ್ರದೇಶದ ಪ್ರಮುಖ ಒಬಿಸಿ ನಾಯಕರಾಗಿದ್ದಾರೆ. ಇವರಿಗಿಂತ ಮುನ್ನ ಜಿತಿನ್ ಪ್ರಸಾದ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರು ಈಗ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದಾರೆ. ಇಬ್ಬರು ಪ್ರಮುಖ ಒಬಿಸಿ ನಾಯಕರು ಪಕ್ಷ ತೊರೆದಿರುವುದರಿಂದ ಕಾಂಗ್ರೆಸ್ ಗೆ ಹಿನ್ನಡೆಯುಂಟಾಗಿದೆ.
Today, at a time, we are celebrating the formation of our great Republic, I begin a new chapter in my political journey. Jai Hind pic.twitter.com/O4jWyL0YDC
— RPN Singh (@SinghRPN) January 25, 2022
ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಕಟಿಸಿದ್ದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಆರ್ ಪಿ ಎನ್ ಸಿಂಗ್ ಅವರ ಹೆಸರಿತ್ತು. ಸಿಂಗ್ ಇತ್ತೀಚೆಗೆ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿರುವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಅವರ ಭದ್ರಕೋಟೆಯಾದ ಪದ್ರೌನಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ.
ಇನ್ನು ಬಿಜೆಪಿಗೆ ಸೇರಿದ ಬಳಿಕ ಪ್ರತಿಕ್ರಿಯೆ ನೀಡಿರುವ ಸಿಂಗ್ ‘ನಾನು ಕಾಂಗ್ರೆಸ್ ಪಕ್ಷದಲ್ಲಿ 32 ವರ್ಷದಿಂದ ಇದ್ದೆ. ಆದರೆ ಕಾಂಗ್ರೆಸ್ ಪಕ್ಷ ಅದೇ ಹಳೆಯ ಪಕ್ಷವಾಗಿ ಉಳಿದಿಲ್ಲ. ಇಂದು ಜನರ ಅನುಕೂಲಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ದೇಶವನ್ನು ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಪಕ್ಷ ಬಿಜೆಪಿ ಮಾತ್ರ ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ತಿಳಿಸಿದ್ದಾರೆ.
This is a new beginning for me and I look forward to my contribution to nation building under the visionary leadership & guidance of the Honourable Prime Minister Shri @narendramodi, BJP President Shri @JPNadda ji & Honourable Home Minister @AmitShah ji.
— RPN Singh (@SinghRPN) January 25, 2022