ಬೆಳಗಾವಿ: ಬೆಳಗಾವಿಯ ಜಾಧವ ನಗರದಲ್ಲಿ ಚಿರತೆಯೊಂದ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿತ್ತು. ಈ ವಿಷಯ ತಿಳಿದ ಕಾರ್ಮಿಕನ ತಾಯಿ ಹೃದಯಾಘಾತದಿಂದ ಮೃತಪಟ್ಟಿದ್ಧಾರೆ.
ಬೆಳಗಾವಿ ತಾಲೂಕಿನ ಖನಗಾವಿ ಕೆ.ಹೆಚ್. ಗ್ರಾಮದ ಶಾಂತಾ ಮಿರಜಕರ್ (65) ಮೃತಪಟ್ಟವರು. ಇಂದು ಜಾಧವ ನಗರದಲ್ಲಿ ಸಿದರಾಯಿ ಲಕ್ಷ್ಮಣ ಮಿರಜಕರ್ ಕೆಲಸ ಮಾಡುತ್ತಿದ್ಧಾಗ. ಚಿರತೆ ತಮ್ಮ ಮೇಲೆ ದಾಳಿ ನಡೆಸಿತ್ತು, ಚಿರತೆ ದಾಳಿಯಿಂದ ತಮ್ಮ ಬೆನ್ನಿನಲ್ಲಿ ಗಾಯವಾಗಿದೆ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಚಿರತೆ ಪತ್ತೆಯಾಗಿ ಕಾರ್ಯಾಚರಣೆ ಆರಂಭಿಸಿದ್ದರು.
ಇದನ್ನೂ ಓದಿ: ಬೆಳಗಾವಿಯ ಜಾಧವ್ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ…
ಆದರೆ ತಮ್ಮ ಪುತ್ರ ಸಿದರಾಯಿ ಮೇಲೆ ಚಿರತೆ ದಾಳಿ ನಡೆಸಿದ ಸುದ್ದಿ ತಿಳಿದ ಶಾಂತಾ ಅವರಿಗೆ ಹೃದಯಾಘಾತವಾಗಿದ್ದು, ಅವರು ಮೃತಪಟ್ಟಿದ್ಧಾರೆ. ಚಿರತೆ ದಾಳಿಯಿಂದ ಗಾಯಗೊಂಡಿದ್ದ ಕಾರ್ಮಿಕ ಸಿದರಾಯಿ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದಾರೆ. ಆದರೆ ಅವರು ಮನೆಗೆ ವಾಪಸ್ ಬರುವಷ್ಟರಲ್ಲಿ ತಾಯಿಯ ನಿಧನದ ಸುದ್ದಿ ಬಂದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಎಪಿಎಂಸಿ ಠಾಣೆ ಪೊಲೀಸರು, ಅಗ್ನಿಶಾಮಕ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಆಗಮಿಸಿ ಚಿರತೆಗಾಗಿ ಶೋಧ ನಡೆಸುತ್ತಿದ್ದಾರೆ. ಚಿರತೆ ಸಿಗುವವರೆಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.