ಪ್ರಪಂಚದಲ್ಲಿ ಕೊರೋನ ಸೋಂಕು ಕಡಿಮೆಯಾಗುತ್ತಿದ್ದು, ಜನ ಆತಂಕ ಪಡುವ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರು ಅಮೆರಿಕ ದೇಶಕ್ಕೆ ಈಗ ಮತ್ತೊಂದು ಸಂಕಟ ಎದುರಾಗಿದೆ.ಏನಪ್ಪ ಇದು ಅಂತ ತಿಳಿಬೇಕ, ಈ ಸ್ಟೋರಿನ ಪೂರ್ತಿ ನೋಡಿ.
ಇಂದಿನ ದಿನಗಳಲ್ಲಿ ಕೆಲವು ದೇಶಗಳಲ್ಲಿ ಕೊರೋನ ಹಾವಳಿ ಹೆಚ್ಚಾಗಿದ್ದು, ಮತ್ತೆ ಲಾಕ್ ಡೌನ್ನತ್ತ ಕೆಲವು ದೇಶಗಳು ಮುಖ ಮಾಡುತ್ತಿವೆ. ಇದರ ಬೆನ್ನಲೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಕೊರೋನ ವೈರಸ್ ಸೋಂಕಿನ ಹಾವಳಿ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಕೊವಿಡ್-19 ಲಸಿಕೆ ವಿತರಣೆ ನಡುವೆಯೂ ಒಂದೇ ದಿನ 64267 ಮಂದಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಅಮೆರಿಕಾದಲ್ಲಿ ಈಗಾಗಲೇ ಕೊವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವವರ ಸಂಖ್ಯೆ 5.35 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1656 ಮಂದಿ ಕ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 5,35,429ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 2,95,90,690 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 2,01,81,244 ಸೋಂಕಿತರು ಗುಣಮುಖರಾಗಿದ್ದು, 88,74,017 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.
ವಿಶ್ವದಲ್ಲಿ ಒಂದೇ ದಿನ ಒಟ್ಟು 4,34,607 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,66,47,742ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 9,317 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 25,90,968ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,22,57,239 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,17,99,535 ಕೊರೋನ ವೈರಸ್ ಸಕ್ರಿಯ ಪ್ರಕರಣಗಳಿವೆ.