ಬೆಳಗಾವಿ : ರಾಜ್ಯಾದ್ಯಂತ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬೆಳಗಾವಿಯಲ್ಲೂ ತನ್ನ ಆರ್ಭಟ ಹೆಚ್ಚಾಗಿದೆ. ಡೆಡ್ಲಿ ವೈರಸ್ಗೆ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಾಗಿ ಸೋಂಕು ತಗಲುತ್ತಿದ್ದು, ಇದುವರೆಗೂ 218 ಶಾಲಾ ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.
ಬೆಳಗಾವಿಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಡೆಡ್ಲಿ ವೈರಸ್ ಹೆಚ್ಚಾಗಿ ಶಾಲಾ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡ್ತಿದ್ಯಾ ಅನ್ನೋ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 218 ಶಾಲಾ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ ಮುಂದುವರೆದಿದ್ದು, ಈ ವಸತಿ ಶಾಲೆಯ ಒಟ್ಟು 138 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಪೋಷಕರಲ್ಲಿ ಆತಂಕ ಹೆಚ್ಚಾಗುತ್ತಿದೆ.
ಇದನ್ನೂ ಓದಿ : ಓಮಿಕ್ರಾನ್ನಿಂದ ಜನ ಆತಂಕಪಡುವ ಅಗತ್ಯವಿಲ್ಲ .. ಸೋಂಕು ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರದಿಂದ ಕ್ರಮ : ಪ್ರಧಾನಿ ಮೋದಿ ..