ನವದೆಹಲಿ: ಕೇಂದ್ರ ಸರ್ಕಾರ ಗುರು ನಾನಕ್ ಜಯಂತಿಯಂದೇ ಮಹತ್ವದ ತೀರ್ಮಾನ ಕೈಗೊಂಡಿದ್ದು, 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದಿದೆ. ಗುರು ಪೂರ್ಣಿಮೆಯ ಹಿನ್ನೆಲೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಯ್ದೆ ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ. ಕಳೆದ ಒಂದು ವರ್ಷದಿಂದ ಕಾಯ್ದೆ ಹಿಂಪಡಿಯುವಂತೆ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ, ಹೋರಾಟ ನಡೆಸುತ್ತಿದ್ದರು, ಕೊನೆಗೂ ರೈತರ ಹೋರಾಟಕ್ಕೆ ಮೋದಿ ಸರ್ಕಾರ ಮಣಿದಿದೆ.
ಇದನ್ನೂ ಓದಿ:ರಾಜ್ಯದಲ್ಲಿ ನಿಲ್ಲದ ಮಳೆಯ ಆರ್ಭಟ… ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ…