ಬೆಂಗಳೂರು : ಸರ್ಕಾರದ ವಿರುದ್ಧ ಮತ್ತೆ ರಾಜ್ಯ ಸಾರಿಗೆ ನೌಕರರು ಸಿಡಿದೆದಿದ್ದಾರೆ. ಮತ್ತೆ ರಾಜ್ಯದಲ್ಲಿ ಸರ್ಕಾರಿ ಬಸ್ ಸಂಚಾರ ಸ್ತಬ್ಥವಾಗುತ್ತಾ..?6 ವರ್ಷ ಕಳೆದ್ರೂ ಸಾರಿಗೆ ನೌಕರರ ವೇತನ ಹೆಚ್ಚಿಸಿಲ್ಲ ಅಂತಾ ಆಕ್ರೋಶ ಹೊರಹಾಕುತ್ತಿದ್ದಾರೆ.
ಸರ್ಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ತೀರ್ಮಾನ ಮಾಡಲಾಗಿದೆ. ಸರ್ಕಾರದ ಗಮನ ಸೆಳೆಯಲು ನಾಳೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ. ನೌಕರರ ಧರಣಿಯಿಂದ ಸರ್ಕಾರಿ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಗಳಿವೆ.
ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ. ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಸಿ, ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಮುಂದಿಟ್ಟು ಧರಣಿ ಮಾಡುತ್ತಾರೆ. ನೌಕರರು 2021ರ ಏಪ್ರಿಲ್ನಲ್ಲಿ 15 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ನಡೆಯಲಿದೆ. ಪ್ರತಿ 4 ವರ್ಷಕ್ಕೊಮ್ಮೆ ನೌಕರರ ವೇತನ ಪರಿಷ್ಕರಣೆ ಮಾಡಬೇಕು, 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಆಗಿಲ್ಲ ಎಂದಿದ್ದಾರೆ. KSRTC, BMTC, ಕಲ್ಯಾಣ ಹಾಗೂ ವಾಯುವ್ಯ ಕರ್ನಾಟಕ ನಿಗಮಗಳು, 1 ಲಕ್ಷ 30 ಸಾವಿರ ನೌಕರರು ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ 2016ರಲ್ಲಿ ಶೇ 12.5 ರಷ್ಟು ವೇತನ ಪರಿಷ್ಕರಣೆ ಮಾಡಿತ್ತು.
ಇದನ್ನೂ ಓದಿ : ಬೆಂಗಳೂರಲ್ಲಿ ಎಮ್ಮೆ ಕಾಟಕ್ಕೆ ಐಟಿ-ಬಿಟಿ ಉದ್ಯೋಗಿಗಳು ಕಂಗಾಲ್… ಟ್ವಿಟರ್ ಮೂಲಕ ಟ್ರಾಫಿಕ್ ಪೊಲೀಸರಿಗೆ ಕಂಪ್ಲೇಂಟ್…