ದೇವನಹಳ್ಳಿ: ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ದೇವೇಗೌಡರಿಗೆ ಆಹ್ವಾನ ನೀಡದಿದ್ದಕ್ಕೆ ಜೆಡಿಎಸ್ ಆಕ್ರೋಶ ಹೊರ ಹಾಕುತ್ತಿದ್ದು, ಕೆಂಪೇಗೌಡರ ಪ್ರತಿಮೆ ಮುಂದೆ ಜೆಡಿಎಸ್ ಭಾರೀ ಪ್ರೊಟೆಸ್ಟ್ ನಡೆಸಿದ್ದಾರೆ.
MLC ಶರವಣ, MLA ನಿಸರ್ಗ ನಾರಾಯಣಸ್ವಾಮಿ ನೇತೃತ್ವದಲ್ಲಿ ನಾಯಕರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ, ದೇವೇಗೌಡರನ್ನ ಕಡೆಗಣಿಸಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು JDS ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಇದನ್ನೂ ಓದಿ:ಕೋಲಾರದಲ್ಲಿ ಜಡಿ ಮಳೆಯಿಂದಾಗಿ ಮತ್ತೆ ಮುಂದೂಡಿದ ಪಂಚರತ್ನ ರಥಯಾತ್ರೆ..!