ಬೆಂಗಳೂರು: ಭಾರತ್ ಜೋಡೊ ಯಾತ್ರೆ ಸಮಾರೋಪ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಿಲ್ಲವೆಂದು ಖರ್ಗೆಗೆ ದೇವೇಗೌಡರು ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಐಕ್ಯತಾ ಯಾತ್ರೆ ನಡೆಸಿದ್ದು, ಶ್ರೀನಗರದಲ್ಲಿ ಯಾತ್ರೆ ಅಂತಿಮ ಸಮಾರೋಪ ಸಮಾರಂಭ ನಿಗದಿಯಾಗಿದೆ. ಸಮಾರೋಪ ಸಮಾರಂಭಕ್ಕೆ ದೇವೆಗೌಡರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದರು, ಭಾರತ್ ಜೋಡೋ ಕಾರ್ಯಕ್ರಮದಲ್ಲಿ ನೀವು ಇರಬೇಕು ಎಂದಿದ್ದರು. ಆದರೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್ ಡಿ.ದೇವೇಗೌಡ್ರು ಗೈರಾಗಲಿದ್ದಾರೆ.
ಈ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆಗೆ ಹೆಚ್ ಡಿ ಡಿ ಪತ್ರ ಬರೆದಿದ್ದು, ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ, ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ರಾಷ್ಟ್ರಪಿತ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತ.3500 ಕಿಲೋಮೀಟರ್ ರಾಹುಲ್ ಗಾಂಧಿ ನಡೆದಿದ್ದಾರೆ. ನನ್ನ ಶುಭಾಶಯಗಳನ್ನು ರಾಹುಲ್ ಗಾಂಧಿಗೆ ತಿಳಿಸಿ ಎಂದು ಹೆಚ್ ಡಿ ಡಿ ಪತ್ರದ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಜ. 30 ರಂದು ಭಾರತ್ ಜೋಡೋ ಸಮಾರೋಪ ಸಮಾರಂಭ.. ಶ್ರೀನಗರಕ್ಕೆ ಪ್ರಯಾಣ ಬೆಳೆಸಲಿರುವ ರಾಜ್ಯ ಕಾಂಗ್ರೆಸ್ ನಾಯಕರು..