ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನಾಯಕ ವಿರುದ್ಧ ಟ್ವೀಟ್ ವಾರ್ ನಡೆಸುತ್ತಿರುವ ಮಾಜಿ ಸಂಸದೆ ರಮ್ಯಾ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ರಮ್ಯಾ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ರಮ್ಯಾ ಅವರ ನಡೆ ಈಗ ಇದಕ್ಕೆ ಪುಷ್ಠಿ ನೀಡುತ್ತಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಪ್ರವಾಸಕ್ಕೆ ಆಗಮಿಸಿದ್ದಾರೆ. ಅವರು ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿರುವ ಕುರಿತು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ರಮ್ಯಾ ಕಟೀಲು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಬಿ.ವೈ. ವಿಜಯೇಂದ್ರ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್… ಬಿಜೆಪಿ ವರಿಷ್ಠರಿಂದ ಬಿಎಸ್ವೈಗೆ ಭರವಸೆ…
ನೀವು ಈ ಹಿಂದೆ ಭೇಟಿ ನೀಡಿಲ್ಲವಾದರೆ ಒಮ್ಮೆ ಕಟೀಲು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿ. ಪುರಾಣ ಪ್ರಸಿದ್ಧ ಶಕ್ತಿಶಾಲಿ ದೇಗುಲ ಇದಾಗಿದ್ದು ಒಮ್ಮೆ ಭೇಟಿ ನೀಡಿ ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ನಾಯಕರ ಟ್ವೀಟ್ ಗಳಿಗೆ ಪ್ರತಿಕ್ರಿಯೆ ನೀಡುವ ಮೂಲಕ ರಮ್ಯಾ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಮ್ಯಾ ಬಿಜೆಪಿ ಸೇರೋ ವದಂತಿಗಳಿಗೆ ಟ್ವೀಟ್ ಪ್ರತಿಕ್ರಿಯೆ ನೀಡ್ತಿದೆ ಪುಷ್ಟಿ ನೀಡುತ್ತಿದೆ.
If time permits Nirmala ji you must visit Kateel DurgaParmeshwari temple, it’s quite close to Udupi. Not sure if you’ve been there before. One of the oldest and powerful temples around Udupi.
— Divya Spandana/Ramya (@divyaspandana) May 13, 2022